ಬೆಂಗಳೂರು, ಜೂ 03 (Daijiworld News/MSP): ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಸೋಮವಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿದರು ಆ ಬಳಿಕ ಉಪಮುಖ್ಯಮಂತ್ರಿ ಪರಮೇಶ್ವರ್ ಅವರನ್ನು ಭೇಟಿಯಾದರು.
ಬಾಗೇಪಲ್ಲಿ- ಹಲಗೂರು ಮಾರ್ಗದಲ್ಲಿ ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಗಡಿ ತಾಲ್ಲೂಕಿನ ಕುದೂರು ಗ್ರಾಮದಲ್ಲಿ ರಸ್ತೆ ಬದಿಯ ಮರಗಳನ್ನು ಕಡಿಯಲು ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಸೂಚಿಸಿದರು. ಅಗತ್ಯ ಬಿದ್ದಲ್ಲಿ ರಸ್ತೆಯ ಮಾರ್ಗವನ್ನು ಬದಲಿಸುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಗ್ರಾಮದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮನವಿ ಸಲ್ಲಿಸಿದರು.
ಆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ತಿಮ್ಮಕ್ಕ, ಮರಗಳ ಹನನ ಮಾಡದಂತೆ ಮನವಿ ಸಿಎಂಗೆ ಮನವಿ ಮಾಡಿದ್ದೇನೆ. ನನ್ನ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಒಂದು ವೇಳೆ ಮನವಿಯನ್ನು ಮೀರಿ ಮರ ಕಡಿಯಲು ಮುಂದಾದರೆ ನಾನು ನನ್ನ ಮಗ ಮರದ ಕೆಳಗೆ ಕುಳಿತು ಪ್ರತಿಭಟನೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.