ನವದೆಹಲಿ,ಜೂ03(Daijiworld News/AZM): ನೂತನ ಕೇಂದ್ರ ಸರ್ಕಾರ ಸಂಪುಟ ದರ್ಜೆ ಸ್ಥಾನವನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೀಡಲಾಗಿದೆ.
ರಾಷ್ಟ್ರೀಯ ಭದ್ರತಾ ವಿಚಾರವಾಗಿ ಅವರು ನೀಡಿದ ಸೇವೆಯನ್ನು ಪರಿಗಣಿಸಿ ಈ ಸ್ಥಾನ ನೀಡಲಾಗಿದೆ. ಮುಂದಿನ ಐದು ವರ್ಷಗಳ ಅವಧಿಗೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಅಜಿತ್ ದೋವಲ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿಯೂ ಮುಂದುವರಿಯಲಿದ್ದಾರೆ.