ಮೈಸೂರು, ಅ.25(DaijiworldNews/AK) :ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಹಿನ್ನಲ್ಲೆ ಇಂದು ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ವಿಚಾರಣೆಗೆ ಹಾಜರಾಗಿದ್ದರು.
ಮುಡಾ ಪ್ರಕರಣದ ಎಫ್ಐಆರ್ನಲ್ಲಿ 2ನೇ ಆರೋಪಿಯಾಗಿರುವ ಬಿ.ಎಂ.ಪಾರ್ವತಿ ಲೋಕಾಯುಕ್ತ ನೋಟಿಸ್ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದರು.ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಯಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ವಿಚಾರಣೆಗೆ ಹಾಜರಾಗಿದ್ದರು. ಮೈಸೂರು ಲೋಕಾಯುಕ್ತ ಪೊಲೀಸರು ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಹೀಗಾಗಿ ಇದೀಗ ಪಾರ್ವತಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಈಗಾಗಲೇ ಮುಡಾ ಪ್ರಕರಣ ವಿಚಾರವಾಗಿ ಎ3 ಮಲ್ಲಿಕಾರ್ಜುನಸ್ವಾಮಿ, ಎ4 ದೇವರಾಜು ಕರೆಸಿ ಮೈಸೂರು ಲೋಕಾಯುಕ್ತ ಪೊಲೀಸರು ವಿಚಾರಣೆ ಮಾಡಿದ್ದಾರೆ. ಆದರೆ A1 ಸಿಎಂ ಸಿದ್ದರಾಮಯ್ಯ ವಿಚಾರಣೆ ಮಾತ್ರ ಬಾಕಿ ಇದೆ.