ಮುಂಬೈ, ,ಅ.25(DaijiworldNews/AK) :ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೌವಿಕ್ ಚಕ್ರವರ್ತಿ ಅವರಿಗೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಹೊರಡಿಸಿದ್ದ ಲುಕ್ ಔಟ್ ನೋಟಿಸ್ ಅನುಮತಿಯನ್ನು ನ್ಯಾಯಾಲಯ ಶುಕ್ರವಾರ (ಅ. 25) ವಜಾಗೊಳಿಸಿದ್ದು ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮತ್ತು ಆಕೆಯ ಸಹೋದರ ಶೋವಿಕ್ ಹಾಗೂ ಆಕೆಯ ತಂದೆ ಇಂದ್ರಜಿತ್ ಚಕ್ರವರ್ತಿ ವಿರುದ್ಧ ಕೇಂದ್ರೀಯ ತನಿಖಾ ದಳ 2020ರಲ್ಲಿ ಲುಕ್ಔಟ್ ನೋಟಿಸ್ ಹೊರಡಿಸಿತ್ತು. ಸಿಬಿಐ ಹೊರಡಿಸಿದ್ದ ಲುಕ್ಔಟ್ ನೋಟಿಸ್ ಅನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಪ್ರಕರಣ ಆಲಿಸಿದ ಸುಪ್ರೀಂ ಕೋರ್ಟ್ ಸಿಬಿಐ ಮನವಿಯನ್ನು ತಿರಸ್ಕರಿಸಿದೆ.
2020 ಜೂನ್ 14ರಂದು ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹ ಬಾಂದ್ರಾದಲ್ಲಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಕುರಿತು ನಟನ ಕುಟುಂಬಸ್ಥರು ದೂರು ನೀಡಿದ್ದರು.