ಹುಬ್ಬಳ್ಳಿ , ಅ.26(DaijiworldNews/AK): ಬೇಲೆಕೆರೆ ಅದಿರು ನಾಪತ್ತೆ ಪ್ರಕರಣ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.
ಶಾಸಕ ಸತೀಶ ಸೈಲ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಪಕ್ಷದ ರಕ್ತದಲ್ಲಿದೆ. ಅದಿರು ನಾಪತ್ತೆ ಪ್ರಕರಣದಿಂದ ಮತ್ತೆ ಇದು ಸಾಬೀತಾಗಿದೆ. 200 ಕೋಟಿ ರೂಪಾಯಿ ಮೌಲ್ಯದ ಅದಿರು ಅಕ್ರಮವಾಗಿ ಚೀನಾಕ್ಕೆ ರಫ್ತು ಮಾಡಿದ್ದ ಪ್ರಕರಣವನ್ನು ಸಿಬಿಐ ಭೇದಿಸಿದೆ. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ಇಬ್ಬರು ಸಹಚರರನ್ನು ದೋಷಿ ಎಂದು ತೀರ್ಪು ನೀಡಿದ ಜನಪ್ರತಿನಿಧಿ ನ್ಯಾಯಾಲಯ ನ್ಯಾಯವನ್ನು ಎತ್ತಿ ಹಿಡಿದಿದೆ ಎಂದರು.
ಕಾಂಗ್ರೆಸ್ ನಾಯಕರೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಹೀಗಿರುವಾಗ ಪಕ್ಷದ ಉಳಿದ ನಾಯಕರಲ್ಲಿ ಪ್ರಾಮಾಣಿಕತೆಯನ್ನು ಅಪೇಕ್ಷಿಸಲು ಸಾಧ್ಯವೇ? ಎಂದು ಪ್ರಶ್ನಿಸಿದರು.