ವಿಜಯಪುರ, ಅ.27(DaijiworldNews/TA):ವಕ್ಫ್ ಕಾನೂನು ವಿರುದ್ಧ ಹೋರಾಟ ಮಾಡುತ್ತೇವೆ. ಅಧಿಕಾರಿಗಳು ನೋಟಿಸ್ ನೀಡುತ್ತಿರುವುದಕ್ಕೆ ರೈತರು ಆತಂಕ ಪಡಬಾರದು, ಕಾನೂನು ಹೋರಾಟ ಮಾಡೋಣ. ನೋಟಿಸ್ ಬಂದರೆ ನಮ್ಮ ಕಚೇರಿ ಸಂಪರ್ಕ ಮಾಡಿ ಎಂಬುವುದಾಗಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಜಿಲ್ಲೆಯಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಯಾವುದೇ ವಕ್ಫ್ ಆಸ್ತಿ ಆಗಿಲ್ಲ ಎನ್ನುತ್ತಾರೆ. ಈ ಹಿಂದೆ ವಿಜಯಪುರದ ಜಿಲ್ಲಾಧಿಕಾರಿಯಾಗಿದ್ದ ಮೊಹಮ್ಮದ್ ಮೋಹಸೀನ್ ರೈತರ ಜಮೀನು ಪಹಣಿಯಲ್ಲಿ ವಕ್ಫ್ ಹೆಸರು ಹಾಕಿ ಹೋಗಿದ್ದಾರೆ. ಅವರ ಮೇಲೆ ಕ್ರಮಕ್ಕಾಗಿ ಒತ್ತಾಯ ಮಾಡಿದ್ದೆ. ಆದರೆ ಕ್ರಮ ತೆಗೆದುಕೊಳ್ಳಲಿಲ್ಲ ಎಂಬುವುದಾಗಿ ಆರೋಪ ಮಾಡಿದರು.
ವಿಜಯಪುರ ಜಿಲ್ಲೆಯ ಇಬ್ಬರು ಶಾಸಕರು ಮುಸ್ಲಿಂ ಪರವಾಗಿ ಕೆಲಸ ಮಾಡುತ್ತಾರೆ. ಮುಸ್ಲಿಂಮರ ನಾಯಕರಾಗಲು ಹೋಗುತ್ತಿದ್ದಾರೆ ಎಂಬುವುದಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹೀಗೆ ಆಯಾ ತಾಲೂಕು ತಹಶೀಲ್ದಾರಗಳು ರೈತರಿಗೆ ನೋಟಿಸ್ ನೀಡುತ್ತಿರುವುದಕ್ಕೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.