ವಿಜಯಪುರ, ಅ.27(DaijiworldNews/AA): ಗೆಜೆಟ್ ನೋಟಿಫಿಕೇಷನ್ನಲ್ಲಿ ತಪ್ಪಾಗಿ ಬರೆದಿದ್ದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ರೈತರ ಅಸ್ತಿಯಲ್ಲಿ ವಕ್ಫ್ ಬೋರ್ಡ್ ಸೇರ್ಪಡೆ ವಿಚಾರವಾಗಿ ಯಾರು ಭಯಪಡುವ ವಿಚಾರ ಇಲ್ಲ. ಗೆಜೆಟ್ ನೋಟಿಫಿಕೇಷನ್ನಲ್ಲಿ ತಪ್ಪಾಗಿ ಬರೆದಿದ್ದರಿಂದ ಗೊಂದಲ ಸೃಷ್ಟಿಯಾಗಿದೆ. ಹೊನವಾಡ ಗ್ರಾಮದಲ್ಲಿ ಕೇವಲ 10 ಎಕರೆ ಮಾತ್ರ ವಕ್ಫ್ ಆಸ್ತಿ ಇದೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ಮತ್ತೆ ಮಾತನಾಡುತ್ತೇನೆ ಎಂದರು
ವಕ್ಫ್ ಆಸ್ತಿಗಳ ಬಗ್ಗೆ ಜಿಲ್ಲೆಯಲ್ಲಿ ಬಹಳಷ್ಟು ಗೊಂದಲ ಸೃಷ್ಟಿ ಮಾಡಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಈ ವಿಚಾರ ಮಾಧ್ಯಮಗಳಲ್ಲಿ ಬರುತ್ತಿದೆ. ಹೊನವಾಡ ಗ್ರಾಮದಲ್ಲಿ 1200 ಎಕರೆ ರೈತರ ಭೂಮಿ ವಕ್ಫ್ ಆಗಿದೆ ಎಂದು ಸುದ್ದಿ ಹಬ್ಬಿಸಲಾಗಿದೆ. ಹೊನವಾಡದಲ್ಲಿ ಯಾವುದೇ ರೈತನಿಗೆ ನೋಟಿಸ್ ನೀಡಿಲ್ಲ. ಗೆಜೆಟ್ನಲ್ಲಿ ಗೊಂದಲ ಉಂಟಾಗಿ ಈ ರೀತಿಯಾಗಿದೆ. 10 ಎಕರೆ ಮಾತ್ರ ವಕ್ಫ್ ಆಸ್ತಿ ಹೊನವಾಡದಲ್ಲಿದೆ. 124 ನೋಟಿಸ್ ಜಿಲ್ಲೆಯಲ್ಲಿ ನೀಡಲಾಗಿದೆ. 433 ರೈತರಿಗೆ ನೋಟಿಸ್ ನೀಡಲಾಗಿದೆ. ಚಡಚಣ, ಇಂಡಿ ತಹಶೀಲ್ದಾರರ್ ನೋಟಿಸ್ ನೀಡದೇ ಸರ್ವೇ ನಂಬರ್ ಹಾಕಿದ್ದಾರೆ. ಎಸಿ ಅವರು ಈ ಬಗ್ಗೆ ತನಿಖೆ ಮಾಡುತ್ತಾರೆ ಎಂದು ಹೇಳಿದರು.