ನವದೆಹಲಿ, ಜೂ 03 (Daijiworld News/SM): ಇತ್ತೀಚೆಗೆ ಹೊರಬಿದ್ದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ನಡೆಸಿದ ಬಹುತೇಕ ಪಕ್ಷಗಳಿಗೆ ಮುಖಭಂಗವಾಗಿದೆ. ಉತ್ತರ ಪ್ರದೇಶದಲ್ಲಿ ಲೋಕಸಭಾ ಚುನಾವಣೆಯಲ್ಲಿ ಎಸ್ ಪಿ -ಬಿಎಸ್ ಪಿ ಮೈತ್ರಿಗೂ ಇದರಿಂದ ಹೊರತಾಗಿಲ್ಲ. ಹೀನಾಯ ಸೋಲು ಅನುಭವಿಸಿದ ನಂತರ ಬಿಎಸ್ ಪಿ ಮುಖ್ಯಸ್ಥೆ ಮಾಯವತಿ ಅವರು ಎಸ್ ಪಿ ಜೊತೆಗಿನ ಮೈತ್ರಿ ಕೊನೆಗೊಳಿಸಲು ಮುಂದಾಗಿದ್ದಾರೆ.
ದೆಹಲಿಯಲ್ಲಿ ಪಕ್ಷದ ನಾಯಕರ ಜತೆಗೆ ಸಭೆಯಲ್ಲಿ ಮಾತನಾಡಿದ ಮಾಯಾವತಿ, ಉತ್ತರ ಪ್ರದೇಶದಲ್ಲಿ ನಡೆಯಲಿರುವ 11 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿದೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ ಎಂದು ಘೋಷಿಸಿದ್ದಾರೆ.
ಉಪ ಚುನಾವಣೆಯಲ್ಲಿ ಬಿಎಸ್ಪಿ ಸ್ಪರ್ಧಿಸುವುದಿಲ್ಲ. ಆದರೆ ಈ ಬಾರಿ ಉಪ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಮಾಡಿದೆ. ಅಲ್ಲದೆ ಏಕಾಂಗಿ ಹೋರಾಟ ನಡೆಸಲಿದೆ. ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಹಾಗೂ ಆರ್ ಎಲ್ ಡಿ ತಮ್ಮ ಮತಗಳನ್ನು ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳಿಗೆ ವರ್ಗಾಯಿಸಿಲ್ಲ ಎಂದು ಪಕ್ಷದ ಪುನರಾವಲೋಕನ ಸಭೆಯಲ್ಲಿ ಮಾಯವತಿ, ಕಾರ್ಯಕರ್ತರಿಗೆ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿದ್ಯುನ್ಮಾನ ಮತಯಂತ್ರಗಳು ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಹಲವಾರು ವಿಚಾರಗಳ ಬಗ್ಗೆ ಸಭೆಯಲ್ಲಿ ಪಕ್ಷ ಚರ್ಚೆ ನಡೆಸಿತು ಎಂದು ಬಿಎಸ್ ಪಿ ನಾಯಕರು ಹೇಳಿದ್ದಾರೆ.