ಶ್ರೀನಗರ, ಅ.28(DaijiworldNews/AA): ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಇದರ ಬೆನ್ನಲ್ಲೇ ನಡೆದ ಭದ್ರತಾ ಪಡೆಯ ಶೋಧ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ ಮೂಲಗಳು ಮಾಹಿತಿ ನೀಡಿದೆ.
ಶೋಧ ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದೆ. ಅಲ್ಲದೇ ಎನ್ಕೌಂಟರ್ ಮುಂದುವರೆದಿದೆ ಎಂದು ಮೂಲಗಳಿಂದ ತಿಲಿದುಬಂದಿದೆ.
ಬಟಾಲ್ ಪ್ರದೇಶದಲ್ಲಿ ಬೆಳಗ್ಗೆ 6-7 ಗಂಟೆ ಸುಮಾರಿಗೆ ಉಗ್ರಗಾಮಿಗಳು ಸೈನಿಕರ ವಾಹನಗಳ ಮೇಲೆ ಹಲವು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಭದ್ರತಾ ಪಡೆಗಳು ತಕ್ಷಣವೇ ಈ ಪ್ರದೇಶವನ್ನು ಸುತ್ತುವರಿದು ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದವು.