ಕಾಶ್ಮೀರ,ನ.01 (DaijiworldNews/TA):ವಲಸೆ ಕಾರ್ಮಿಕರ ಮೇಲೆ ನಡೆದ ಮತ್ತೊಂದು ಭಯೋತ್ಪಾದಕ ದಾಳಿಯಲ್ಲಿ ಉತ್ತರ ಪ್ರದೇಶದ ಇಬ್ಬರು ವ್ಯಕ್ತಿಗಳ ಮೇಲೆ ಶುಕ್ರವಾರ ಸಂಜೆ ಬುದ್ಗಾಮ್ನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಕೇಂದ್ರ ಕಾಶ್ಮೀರದ ಬುದ್ಗಾಮ್ನ ಮಜಮಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬಲಿಯಾದ ಇಬ್ಬರು ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶದ 25 ವರ್ಷದ ಸೋಫಿಯಾನ್ ಮತ್ತು 20 ವರ್ಷದ ಉಸ್ಮಾನ್ ಮಲಿಕ್ ಎಂದು ಗುರುತಿಸಲಾಗಿದೆ. ಮಗಮ್ನ ಮಂಜಮ ಪ್ರದೇಶದಲ್ಲಿ ನೀರಿನ ಟ್ಯಾಂಕ್ ನಿರ್ಮಿಸುವ ಕೆಲಸ ಮಾಡುತ್ತಿದ್ದಾಗ ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಇಬ್ಬರನ್ನೂ ಶ್ರೀನಗರದ ಜೆವಿಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ವರದಿಗಳ ಪ್ರಕಾರ, ಉಸ್ಮಾನ್ ಅವರ ಬಲ ಮಣಿಕಟ್ಟಿಗೆ ಗಾಯಗಳಾಗಿದ್ದು, ಸೂಫಿಯಾನ್ ಅವರ ಬಲ ಕಾಲಿಗೆ ಗಾಯವಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಭಯೋತ್ಪಾದಕರನ್ನು ಬಂಧಿಸಲು ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿವೆ.