ಬೆಂಗಳೂರು,ನ.01(DaijiworldNews/AK): ಮಾಜಿ ಮುಖ್ಯಮಂತ್ರಿ ಹಾಗೂ ಸಾಹಿತಿ ವೀರಪ್ಪ ಮೊಯ್ಲಿ, ತುಂಬೆ ಮೊಹಿಯುದ್ದೀನ್ , ಪ್ರಶಾಂತ್ ಮಾಡ್ತಾ ಅಯೋಧ್ಯೆ ರಾಮಮಂದಿರದ ರಾಮಲಲ್ಲಾ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್, ಸೇರಿದಂತೆ 69 ಸಾಧಕರಿಗೆ ಶುಕ್ರವಾರ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಈ ವೇಳೆ ಉಪಸ್ಥಿತರಿದ್ದರು.