ಬೆಂಗಳೂರು,ನ.04(DaijiworldNews/AK): ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧಿಸಿದಂತೆ 4 ವಾರಗಳ ಕಾಲ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಆ ಮೂಲಕ ಡಿಕೆ ಶಿವಕುಮಾರ್ಗೆ ಕೊಂಚ ರಿಲೀಫ್ ಸಿಕ್ಕಿದೆ.
ಇತ್ತೀಚೆಗೆ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಶಾಸಕ ಯತ್ನಾಳ್ ಪ್ರಶ್ನಿಸಿದ್ದರು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಕೂಡ ಸಲ್ಲಿಸಿದ್ದರು. ಸಿಬಿಐ ಕೂಡ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಸದ್ಯ ನಾಲ್ಕು ವಾರಗಳ ಕಾಲ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.