ಬೆಂಗಳೂರು,ನ.06(DaijiworldNews/TA):ಮುಡಾ ನಿವೇಶವನ್ನು ಅಕ್ರಮವಾಗಿ ಪಡೆದ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿತ್ತು. ಇಂದು ಸಿಎಂ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಲಿದ್ದಾರೆ.
ಸಿಎಂ ಬೆಂಗಳೂರಿನ ಕಾವೇರಿ ನಿವಾಸದಿಂದ ಮುಂಜಾನೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ಪ್ರಯಾಣ ಬೆಳಸಿದ್ದಾರೆ. 10 ಗಂಟೆ ಬಳಿಕ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆಗೆ ಒಳಗಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ವಿಚಾರಣೆಗೆ ಬಿಜೆಪಿ ನಾಯಕರು ತಮ್ಮದೇ ಧಾಟಿಯಲ್ಲಿ ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ ವಿಚಾರಣೆ ಎದುರಿಸುತ್ತಿರುವುದು ಸಿಎಂ ಆಗಿಯಾ ಅಥವಾ ಆರೋಪಿಯಾಗಿಯಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.