ಹುಬ್ಬಳ್ಳಿ, ನ.09(DaijiworldNews/AK): ರಾಜ್ಯ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟೋಕನ್ ಮೊರೆ ಹೋಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿ, ಉಪಚುನಾವಣೆ ಗೆಲ್ಲಬೇಕೆಂಬ ಭರದಲ್ಲಿ ಕಾಂಗ್ರೆಸ್ ಪಕ್ಷ ಟೋಕನ್ ಮೂಲಕ ಹಣ ಹಂಚಿಕೆ ಶುರು ಮಾಡಿದೆ ಎಂದು ಹೇಳಿದರು. ಕಾಂಗ್ರೆಸ್ ಲೂಟಿ ಮಾಡಿದ್ದನ್ನು ಹೀಗೆ ಹಂಚುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ನಡೆಯುತ್ತಿರುವ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲುವುದು ನಾವೇ ಎಂದು ಹೇಳಿದರು.ಮೂರೂ ಕ್ಷೇತ್ರಗಳಲ್ಲಿ ಎನ್ಡಿಎ ಅಭೂತಪೂರ್ವ ಗೆಲುವು ಸಾಧಿಸಲಿದೆ. ಸಂಡೂರು, ಶಿಗ್ಗಾವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.