ಪಶ್ಚಿಮ ಬಂಗಾಳ,ನ.10(DaijiworldNews/TA):ಪರಗಣದಲ್ಲಿ ಪಕ್ಷದ ಕಚೇರಿಯಲ್ಲಿ ಸ್ಥಳೀಯ ಬಿಜೆಪಿ ನಾಯಕ ಶವವಾಗಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಮೃತ ಪೃಥ್ವಿರಾಜ್ ನಾಸ್ಕರ್ ಜಿಲ್ಲೆಯಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ಖಾತೆಯನ್ನು ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಟಿಎಂಸಿ ಹತ್ಯೆ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ, ಕೊಲೆಗೆ ಕಾರಣ ವೈಯಕ್ತಿಕವಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಂಧಿತ ಮಹಿಳೆಯು ಮೃತನಿಗೆ ಹರಿತವಾದ ಆಯುಧಗಳಿಂದ ಹೊಡೆದಿದ್ದು ಆತನ ಸಾವಿಗೆ ಕಾರಣವಾಯಿತು ಎಂದು ಒಪ್ಪಿಕೊಂಡಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿಕೆ ನೀಡಿದ್ದಾರೆ.
ಹತ್ಯೆಯ ನಂತರ ಬಿಜೆಪಿ ಮತ್ತು ಟಿಎಂಸಿ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಕೇಸರಿ ಪಕ್ಷದ ಬೆಂಬಲಿಗರನ್ನು ಹೆದರಿಸಲು ಸ್ಥಳೀಯ ಟಿಎಂಸಿ ಕಾರ್ಯಕರ್ತರು ನಸ್ಕರ್ ಹತ್ಯೆಯ ಹಿಂದೆ ಇದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.