ಬಳ್ಳಾರಿ, ನ.10(DaijiworldNews/AA): ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಗಳು ಜಯ ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮರ್ಥ ಮುಖ್ಯಮಂತ್ರಿಯಾಗಿದ್ದಾರೆ ಎಂದು ಅವರ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕೋವಿಡ್ ನಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ತಮ್ಮ ಹಗರಣಗಳನ್ನು ಮುಚ್ಚಿಹಾಕಲು ಪ್ರಯತ್ನಿಸಿ, ಈಗ ಬಿಜೆಪಿ ಧ್ವನಿಯನ್ನು ಮಟ್ಟ ಹಾಕಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದಿದ್ದಾರೆ. ಜೊತೆಗೆ ಮುಡಾ ಹಗರಣದಲ್ಲಿ ಇಡಿ ತನಿಖೆ ನಡೆದರೂ ಮುಡಾ ಆಯುಕ್ತ ನಾಪತ್ತೆಯಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಹೇಳಿದ್ದಾರೆ.