ಬೆಂಗಳೂರು, ನ.10(DaijiworldNews/TA):ಸಚಿವ ಜಮೀರ್ ಅಹಮ್ಮದ್ ಖಾನ್ಗೆ ಇದೀಗ ಸಂಕಷ್ಟ ಎದುರಾಗಿದೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರ ಥಾವರ್ ಚೆಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆ.
ಮುಡಾ ಹಗರಣ ತನಿಖೆ ವಿಚಾರವಾಗಿ ಸಿಎಂ, ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸಿಎಂ ವಿರುದ್ಧದ ತನಿಖೆಗೆ ಆದೇಶಿಸಿತ್ತು. ಈ ತೀರ್ಪನ್ನು ಜಮೀರ್ ಅಹಮ್ಮದ್ ಖಾನ್, ರಾಜಕೀಯ ಪ್ರೇರಿತವಾಗಿದ್ದು, ಇದೊಂದು ರಾಜಕೀಯ ತೀರ್ಪು ಎಂದು ಹೇಳಿಕೆ ನೀಡಿದ್ದರು.
ಜಮೀರ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಅಬ್ರಾಹಂ ಜಮೀರ್ ಅಹಮ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಈ ದೂರಿನ ಮೇರೆಗೆ ರಾಜ್ಯಪಾಲರು ಜಮೀರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.