ಬೆಂಗಳೂರು, ಜೂ 04 (Daijiworld News/SM): ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ಮೇಕೆದಾಟು ಯೋಜನೆ ಸಂಬಂಧ ರಾಜ್ಯ ಸರ್ಕಾರ ಕ್ರಮಕೈಗೊಂಡಿದ್ದರೆ ಅದನ್ನು ಸ್ವಾಗತಿಸುತ್ತೇನೆ. ಮಾತ್ರವಲ್ಲದೆ ಸಭೆಗಳನ್ನು ನಡೆಸಲು ಕ್ರಮ ಕೈಗೊಳ್ಳುತ್ತೇವೆ ಎಂದರು. ಮೇಕೆದಾಟು ಯೋಜನೆ ಕುರಿತು ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಡಿವಿಎಸ್ ಪ್ರತಿಕ್ರಿಯೆ ನೀಡಿದ್ದಾರೆ.
ಡಿಪಿಆರ್ ಕುರಿತು ಮಾಹಿತಿ ಪಡೆದು ಮುಖ್ಯಮಂತ್ರಿ ಕುಮಾರಸ್ವಾಮಿ, ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಅವರೊಂದಿಗೆ ಸಭೆಗಳನ್ನು ನಡೆಸಲು ಕ್ರಮ ಕೈಗೊಳ್ಳುತ್ತೇನೆ. ನಾವು 25 ಸಂಸದರು ರಾಜ್ಯದ ಸಂಪೂರ್ಣ ಅಭಿವೃದ್ಧಿಗೆ ಸಹಕಾರ ಕೊಡುತ್ತೇವೆ ಎಂದರು.