ಬೆಂಗಳೂರು, ಜೂ 04 (Daijiworld News/SM): ಕಾಂಗ್ರೆಸ್ ಪಕ್ಷದಲ್ಲಿ ಮುನಿಸಿಕೊಂಡಿರುವ ಶಾಸಕರು ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಪದೇಪದೆ ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ. ಇದೀಗ ರಾಜೀನಾಮೆ ನೀಡಿದ್ದಾರೆ. ಪಕ್ಷದ ವಿರುದ್ಧ ತಾನು ಹೊಂದಿರುವ ಅಸಮಾಧಾನದಿಂದಾಗಿ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಅದು ಅವರ ಪಕ್ಷಕ್ಕೆ ಬಿಟ್ಟಿದ್ದು ಎಂದಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕರೂ ಕೂಡ ತಮ್ಮ ಪಕ್ಷದ ವಿರುದ್ಧ ಅಸಮಾಧಾನ ಬಹಿರಂಗಪಡಿಸಿದ್ದಾರೆ. ಅವರು ಪಕ್ಷ ಹಾಗೂ ಪ್ರಮುಖ ಮುಖಂಡರ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ನಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ. ಹೊಸದಾಗಿ ಬಂದವರಿಗೆ ಮಂತ್ರಿಸ್ಥಾನ ಕೊಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಒಳಗಡೆಯೇ ಗೊಂದಲವಿದೆ ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.