ಮಹಾರಾಷ್ಟ್ರ, ನ.13(DaijiworldNews/AK): ತಮ್ಮ ನಾಲ್ಕನೇ ತಲೆಮಾರು ಬಂದರೂ ಮುಸ್ಲಿಮರಿಗೆ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ನೀಡಲಾಗುವ ಮೀಸಲು ಸಿಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಟ್ಟುಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಮುಸ್ಲಿಮರಿಗೆ ಮೀಸಲಾತಿ ನೀಡಬೇಕಾದರೆ, ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ಕಡಿತಗೊಳಿಸಬೇಕಾಗುತ್ತದೆ. ರಾಹುಲ್ ಅವರ ನಾಲ್ಕು ತಲೆಮಾರುಗಳು ಬಂದರೂ, ಅವರು ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಮೀಸಲಾದ ಕೋಟಾವನ್ನು ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ಸಾಧ್ಯವಿಲ್ಲ ಎಂದರು.
ಏನೇ ಬಂದರೂ 370ನೇ ವಿಧಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ. ಇಂದಿರಾ ಗಾಂಧಿ ಸ್ವರ್ಗದಿಂದ ಬಂದರೂ , 370 ನೇ ವಿಧಿಯನ್ನು ಮರುಸ್ಥಾಪಿಸಲಾಗುವುದಿಲ್ಲ ಎಂದು ಶಾ ಹೇಳಿದರು.
ಕೇಂದ್ರ ಗೃಹ ಸಚಿವರಾಗಿದ್ದಾಗ ಶ್ರೀನಗರದ ಲಾಲ್ ಚೌಕ್ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಯಭೀತರಾಗಿದ್ದೆ ಎಂದು ಕಾಂಗ್ರೆಸ್ ಮುಖಂಡ ಸುಶೀಲ್ಕುಮಾರ್ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾ, ಶಿಂಧೇ ಜೀ, ನಿಮ್ಮ ಮೊಮ್ಮಕ್ಕಳೊಂದಿಗೆ ಈಗ ಕಾಶ್ಮೀರಕ್ಕೆ ಹೋಗಿ, ನಿಮಗೆ ಯಾವುದೇ ಹಾನಿಯಾಗುವುದಿಲ್ಲ.
ಸೋನಿಯಾ-ಮನಮೋಹನ್ ಆಡಳಿತದ 10 ವರ್ಷಗಳ ಅವಧಿಯಲ್ಲಿ, ಭಯೋತ್ಪಾದಕರು ಪಾಕಿಸ್ತಾನದಿಂದ ಮುಕ್ತವಾಗಿ ಬಂದು ಇಲ್ಲಿ ಬಾಂಬ್ ಸ್ಫೋಟಗಳನ್ನು ಪ್ರಚೋದಿಸುತ್ತಿದ್ದರು ಎಂದು ಶಾ ಹೇಳಿದರು.