ಬೆಂಗಳೂರು,ನ.15(DaijiworldNews/AK): ಕರ್ನಾಟಕದ ಉಪಚುನಾವಣೆ ಬಳಿಕ ಇದೀಗ ಮಹಾರಾಷ್ಟ್ರ ಚುನಾವಣಾ ಅಖಾಡಕ್ಕಿಳಿಯಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಜ್ಜಾಗಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಇಂದು ಭೀವಂಡಿ, ಚಾಂಡಿವಾಲಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.
https://daijiworld.ap-south-1.linodeobjects.com/Linode/img_tv247/15-11-2024AKDKS.jpg
ನಾಳೆ ನ.16 ಸೊಲ್ಲಾಪುರಕ್ಕೆ ತೆರಳಲಿ ಎರಡು ದಿನಗಳ ಕಾಲ ಮತ್ತೆ ಸರಣಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಜಾಟ್, ಅಕ್ಕಾಲ್ಕೋಟ್,ಸೊಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಾಡಿದ್ದು, ಲಾಥೂರ್ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.
ಮಹಾರಾಷ್ಟ್ರದಲ್ಲಿ ಎಂವಿಎ ಮೈತ್ರಿಯೊಂದಿಗೆ ಕಾಂಗ್ರೆಸ್, ಶಿವಸೇನಾ (ಯುಬಿಟಿ) ಮತ್ತು ನ್ಯಾಷನಲ್ ಕಾಂಗ್ರೆಸ್ ಪಕ್ಷ (ಎಸ್ಪಿ) ಸ್ಪರ್ಧಿಸುತ್ತಿದೆ. ನವೆಂಬರ್ 20ರಂದು ಮಹಾರಾಷ್ಟ್ರದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ನವೆಂಬರ್ 20 ರಂದು ರಾಜ್ಯದ 288 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್, ಶಿವಸೇನೆ ಮತ್ತು ಎನ್ಸಿಪಿಯ ಎರಡೂ ಪಾಳಯಗಳು ಸೇರಿದಂತೆ ಒಟ್ಟು 158 ಪಕ್ಷಗಳು ಉತ್ತರ ಪ್ರದೇಶದ ನಂತರ ದೇಶದ ಎರಡನೇ ಅತಿದೊಡ್ಡ ರಾಜ್ಯ ಚುನಾವಣಾ ಸ್ಪರ್ಧೆಯಲ್ಲಿ ಕಣದಲ್ಲಿವೆ.