ರಾಂಚಿ, ನ.15(DaijiworldNews/AA):ಜಾರ್ಖಂಡ್ನ ದಿಯೋಘರ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆದೊಯ್ಯುವ ವಿಮಾನದಲ್ಲಿ ತಾಂತ್ರಿಕ ದೋಷವನ್ನು ಕಂಡ ಬಂದಿತು. ಇದರ ಪರಿಣಾಮ ಪ್ರಧಾನಿ ಮೋದಿ ದೆಹಲಿಗೆ ಮರಳಲು ವಿಳಂಬವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರು ಚುನಾವಣಾ ರಾಜ್ಯವಾದ ಜಾರ್ಖಂಡ್ನಲ್ಲಿ ತಮ್ಮ ಕಾರ್ಯಕ್ರಮಗಳನ್ನು ಮುಗಿಸಿ ದೆಹಲಿಗೆ ಮರಳಲು ವಿಮಾನ ನಿಲ್ದಾಣಕ್ಕೆ ಬಂದ ನಂತರ ಈ ಘಟನೆ ನಡೆದಿದೆ. ಸುರಕ್ಷತಾ ಕ್ರಮವಾಗಿ ತಾಂತ್ರಿಕ ತಂಡಗಳು ಸಮಸ್ಯೆಯನ್ನು ಗುರುತಿಸಿ, ಸರಿಪಡಿಸಿದ ನಂತರ ವಿಮಾನ ಟೇಕ್ ಆಫ್ ಆಗಿದೆ.
ಇದಕ್ಕೂ ಮುನ್ನ ಅವರು ಬುಡಕಟ್ಟು ವೀರ ಬಿರ್ಸಾ ಮುಂಡಾ ಅವರನ್ನು ಗೌರವಿಸುವ ಜಂಜಾಟಿಯಾ ಗೌರವ್ ದಿವಸ್ ಆಚರಣೆಯ ಅಂಗವಾಗಿ ಜಾರ್ಖಂಡ್ನಲ್ಲಿ ಎರಡು ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದರು. ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಿದರು.