ಬೆಂಗಳೂರು, ನ.16(DaijiworldNews/AA): ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ಗೆ ಲೋಕಾಯುಕ್ತ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್ಪಿ ಜಮೀರ್ ಅಹ್ಮದ್ಗೆ ನೋಟಿಸ್ ನೀಡಿದ್ದಾರೆ. ಈ ಹಿಂದೆ ದಾಖಲೆ ಸಲ್ಲಿಸುವಂತೆ ನೋಟಿಸ್ ನೀಡಲಾಗಿತ್ತು. ಇದೀಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ.
ಇ.ಡಿ ದಾಳಿಯ ನಂತರ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಆಸ್ತಿ ಗಳಿಕೆ ಸಂಬಂಧ ತನಿಖೆ ನಡೆಸುವಂತೆ ಇ.ಡಿ ಸೂಚನೆ ನೀಡಿತ್ತು. ಈ ಬಗ್ಗೆ ಕಳೆದೆರಡು ವರ್ಷಗಳಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ.