ಬೆಂಗಳೂರು, ನ.16(DaijiworldNews/AA): ಅನುದಾನ ಬಿಡುಗಡೆ ಮಾಡದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ 'ನನ್ನ ತೆರಿಗೆ ನನ್ನ ಹಕ್ಕು' ಹೆಸರಿನಲ್ಲಿ ನವೆಂಬರ್ 17ರಂದು ಉಗ್ರ ಹೋರಾಟಕ್ಕೆ ಜಯನಗರದ ಸಂಘ ಸಂಸ್ಥೆಗಳು ಮುಂದಾಗಿವೆ.
ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಅವರಿಂದ ಆದ ಅನ್ಯಾಯವನ್ನು ಖಂಡಿಸಿ ಜಯನಗರ 70 ಸಂಘಟನೆಯ ಸದಸ್ಯರು ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಿದ್ದಾರೆ.
ಈ ಹೋರಾಟಕ್ಕೆ ಸಂಬಂಧಿಸಿದಂತೆ ಜಯನಗರ ಶಾಸಕ ರಾಮಮೂರ್ತಿ ಮಾತನಾಡಿ, ಅನುದಾನ ವಿಚಾರವನ್ನು ಕೇಳಿದ್ದಕ್ಕೆ ನನ್ನ ಮುಂದೆ ತಗ್ಗಿ ಬಗ್ಗಿ ನಡೆಯಬೇಕು. ನಾನು ನನ್ನ ಕ್ಷೇತ್ರದ ಜನರು, ಗುರು ಹಿರಿಯರ ಮುಂದೆ ತಗ್ಗಿ ಬಗ್ಗಿ ನಡೆಯುತ್ತೇನೆ. ಜಯನಗರ ಜನರು ತೆರಿಗೆ ಪಾವತಿಸುತ್ತಿದ್ದಾರೆ. ಈ ಕಾರಣಕ್ಕೆ ನನ್ನ ತೆರಿಗೆ ನನ್ನ ಹಕ್ಕು ಹೆಸರಿನಲ್ಲಿ ಬೃಹತ್ ಹೋರಾಟವನ್ನು ಮಾಡುತ್ತೇವೆ ಎಂದಿದ್ದಾರೆ.
ಅಕ್ಟೋಬರ್ ಕೊನೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರಿನ 27 ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ.ನಂತೆ 270 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿತ್ತು. ಆದರೆ ಈ ಪಟ್ಟಿಯಿಂದ ಡಿಕೆಶಿ ಅವು ಬೇಕಂತಲೇ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಪ್ರತಿನಿಧಿಸುವ ಜಯನಗರ ಕ್ಷೇತ್ರವನ್ನು ಹೊರಗಿಟ್ಟಿದ್ದು ವಿವಾದಕ್ಕೆ ಕಾರಣವಾಗಿದೆ.