ಕೋಲ್ಕತಾ, ಜೂ 05 (Daijiworld News/MSP): ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ನ ಭದ್ರಕೋಟೆಯನ್ನು ಭೇದಿಸಿ ಅದ್ಭುತ ಸಾಧನೆ ಮಾಡಿದ್ದ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದೆ.
ಪಶ್ಚಿಮ ಬಂಗಾಳದಲ್ಲಿ ದೀದಿ ಹಾಗೂ ಬಿಜೆಪಿ ನಡುವಿನ ಕಾಳಗ ತಾರಕ್ಕೇರಿರುವಂತೆಯೇ ಬಂಗಾಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷ ಗೆದ್ದು ಬೀಗಿದ್ದು ಇದರಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ತೀವ್ರ ಮುಖಭಂಗವಾಗಿದೆ.
ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಡುವೆ ಜೈ ಶ್ರೀರಾಮ್, ಜೈ ಬಂಗಾಳ ಕದನ ಜೋರಾಗಿರುವಂತೆ ಲೋಕಲ್ ಫೈಟ್ ನಲ್ಲಿ ಬಿಜೆಪಿ ತನ್ನ ಸಂಖ್ಯೆಗಳನ್ನು ಹೆಚ್ಚಿಸಿಕೊಂಡಿದ್ದು, ಒಟ್ಟು 34 ವಾರ್ಡ್ ಗಳ ಪೈಕಿ 26 ಕೌನ್ಸಿಲರ್ ಗಳು ಬಿಜೆಪಿ ಪರ ಮತ ನೀಡಿದ್ದು, 8 ಮಂದಿ ಕೌನ್ಸಿಲರ್ ಗಳು ಮತದಾನದಿಂದ ದೂರ ಉಳಿಯುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಆ ಮೂಲಕ ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಆಡಳಿತ ಪ್ರಾರಂಭವಾಗಲಿದೆ.