ಬೆಂಗಳೂರು, ನ.17(DaijiworldNews/TA) :ಕೇಂದ್ರ ಸಚಿವ ಕುಮಾರಸ್ವಾಮಿ ಬಣ್ಣದ ಬಗ್ಗೆ ಜಮೀರ್ ಮಾತಾಡಿದ್ದು ಸರಿಯಲ್ಲ ಎಂಬುವುದಾಗಿ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.
ಜಮೀರ್ ಹೇಳಿಕೆ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೂಡ , ಅವರು ಹಾಗೆ ಮಾತನಾಡುವುದು ಸರಿಯಲ್ಲ. ಯಾರೂ ವೈಯಕ್ತಿಕವಾಗಿ ನಿಂದನೆ ಮಾಡಬಾರದು ಎಂಬುವುದಾಗಿ ಹೇಳಿದ್ದಾರೆ ಎಂದರು.
ಜಮೀರ್ ಹೇಳಿಕೆಗೆ ನಾನು ಸಮರ್ಥನೆ ಮಾಡುವುದಿಲ್ಲ. ಈಗಾಗಲೇ ಸಿಎಂ, ಡಿಸಿಎಂ, ವರಿಷ್ಠರು ಚರ್ಚೆ ಮಾಡಿದ್ದಾರೆ. ಯಾರು ಕೂಡಾ ಬಣ್ಣದ ಬಗ್ಗೆ, ಹಾವ-ಭಾವದ ಬಗ್ಗೆ ಮಾತನಾಡುವುದು ಸರಿಯಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದರು.