ಜಮ್ತಾರಾ, ನ.18(DaijiworldNews/AK): ಜಾರ್ಖಂಡ್ನ ಜೆಎಂಎಂ ನೇತೃತ್ವದ ಮೈತ್ರಿಕೂಟದ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಗುಡುಗಿದ್ದಾರೆ. ರಾಜ್ಯದ ನೈಸರ್ಗಿಕ ಸಂಪನ್ಮೂಲಗಳು ಮತ್ತು ಕೇಂದ್ರದ ಹಣವನ್ನು ಲೂಟಿ ಮಾಡುವ ಮೂಲಕ ಜೆಎಂಎಂ ಮೈತ್ರಿಕೂಟವು ಡಕಾಯಿತಿಯಲ್ಲಿ ತೊಡಗಿದೆ ಎಂದು ಆರೋಪಿಸಿದರು.
ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಎಂಎಂ ಲೂಟಿಯಿಂದಾಗಿ ಬಾಂಗ್ಲಾದೇಶಿ ವಲಸಿಗರು ಮತ್ತು ರೋಹಿಂಗ್ಯಾಗಳ ಒಳನುಸುಳುವಿಕೆ ಹೆಚ್ಚಳವಾಗಿದೆ. ಈಗ, ಲೂಟಿ ಮಾಡಿದ ಹಣವನ್ನು ಮರಳಿ ಪಡೆಯಲು ಬುಲ್ಡೋಜರ್ ಸಿದ್ಧವಾಗಿದೆ ಎಂದು ಹೇಳಿದ್ದಾರೆ.
ಸುರಕ್ಷಿತವಾಗಿರಲು ಹಿಂದೂಗಳೆಲ್ಲಾ ಒಂದಾಗಬೇಕು ಎಂದು ಕರೆ ನೀಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಈಗ ಮಥುರಾದಲ್ಲಿ ಕೃಷ್ಣ ಮಂದಿರ ನಿರ್ಮಾಣವಾಗುವ ಸಮಯ ಬಂದಿದೆ ಎಂದರು.
ಮರಳು, ಕಲ್ಲಿದ್ದಲು ಮತ್ತು ಅರಣ್ಯ ಸಂಪನ್ಮೂಲಗಳ ಅವ್ಯಾಹತ ಗಣಿಗಾರಿಕೆ ನಡೆಯುತ್ತಿದೆ. ಅಕ್ರಮ ಗಣಿಗಾರಿಕೆಯು ಈ ಸರ್ಕಾರದಲ್ಲಿ ಹೆಚ್ಚಾಗಿದ್ದು, ಜಾರ್ಖಂಡ್ ಮಾಫಿಯಾ ಚಟುವಟಿಕೆಗಳಿಂದ ಬರಿದಾಗಿದೆ ಎಂದು ಯೋಗಿ ಆರೋಪಿಸಿದ್ದಾರೆ.