ಹುಬ್ಬಳ್ಳಿ,ನ.19(DaijiworldNews/TA):ಶಾಸಕರನ್ನು ಖರೀದಿಸುವ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಆಫರ್ ವಿಚಾರವಾಗಿ ರವಿ ಗಣಿಗ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕ, ಕೇವಲ ಪ್ರಚಾರಕ್ಕಾಗಿ ರವಿ ಗಣಿಗ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಶಾಸಕರನ್ನು ಖರೀದಿಸುವ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂಬುವುದಾಗಿ 100 ಕೋಟಿ ರೂ. ಕೊಟ್ಟು ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಖರೀದಿಸಲು ಯತ್ನಿಸುತ್ತಿದೆ ಎಂಬ ರವಿ ಗಣಿಗ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಈಗಾಗಲೇ ಹತ್ತು ಹಲವಾರು ಶಾಸಕರು ಕಾಂಗ್ರೆಸ್ನಿಂದ ಒಂದು ಕಾಲನ್ನು ಹೊರಗಿಟ್ಟಿದ್ದಾರೆ. ಈ ರೀತಿ ಹಿಟ್ ಆ್ಯಂಡ್ ರನ್ ರೀತಿ ಇಲ್ಲಸಲ್ಲದ ಹೇಳಿಕೆ ನೀಡುವುದರಿಂದ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂಬುವುದಾಗಿ ಗುಡುಗಿದರು.