ದೆಹಲಿ, ನ.21(DaijiworldNews/AK):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದರು.
ಈ ವೇಳೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ನಿರ್ಮಲ ಸೀತರಾಮನ್ಗೆ ಮಾಡಿದರು.
ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.