ಬಳ್ಳಾರಿ, ಜೂ 5 (Daijiworld News/SM): ಕೇಂದ್ರದಲ್ಲಿ ಮೋದಿ ಮತ್ತೆ ಪ್ರಧಾನಿಯಾಗಿರುವ ಕಾರಣ ಈ ಅವಧಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲಿದ್ದಾರೆ ಎಂದು ಪೇಜಾವರ ಶ್ರೀ ವಿಶ್ವಾಸದ ಮಾತುಗಳನ್ನಾಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೇರಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ ಎಲ್ಲ ಮಠಾಧೀಶರು ಪ್ರಧಾನಿಗಳಿಗೆ ಪತ್ರ ಬರೆದು ಒತ್ತಾಯ ಮಾಡುತ್ತೇವೆ. ಅಲ್ಲದೇ ಮೋದಿಯವರು ರಾಮ ಮಂದಿರ ನಿರ್ಮಾಣ ಮಾಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.
ಪ್ರಸ್ತುತ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ. ಮಂದಿರ ನಿರ್ಮಾಣದ ಪರವಾಗಿಯೇ ತೀರ್ಪು ಬರಲಿದೆ ಎಂಬ ವಿಶ್ವಾಸ ಇದೆ ಎಂದು ಅವರು ಹೇಳಿದ್ದಾರೆ.