ಚೆನ್ನೈ, ಜೂ05(Daijiworld News/SS): ಇತರೆ ರಾಜ್ಯಗಳಲ್ಲಿ ತಮಿಳನ್ನು ಐಚ್ಛಿಕ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಪ್ರಧಾನಿ ಮೋದಿ ಅವರಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪಾಡಿ ಕೆ ಪಳನಿಸ್ವಾಮಿ ಮನವಿ ಮಾಡಿದ್ದಾರೆ.
ಇತರೆ ರಾಜ್ಯಗಳಲ್ಲಿ ಅಭ್ಯಾಸ ಮಾಡಲು ಸಾಧ್ಯವಾಗುವಂತೆ ಐಚ್ಛಿಕ ಭಾಷೆಯಾಗಿ ತಮಿಳನ್ನು ಸಹ ಸೇರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡುತ್ತಿದ್ದೇನೆ. ಈ ರೀತಿ ಮಾಡುವುದರಿಂದ ಜಗತ್ತಿನ ಅತಿ ಪುರಾತನ ಭಾಷೆಗಳಲ್ಲಿ ಒಂದಾಗಿರುವ ತಮಿಳಿಗೆ ಮಹದುಪಕಾರ ಮಾಡಿದಂತಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ತಮಿಳುನಾಡನ್ನು ಹೊರತುಪಡಿಸಿ ಇತರ ರಾಜ್ಯಗಳ ಪಠ್ಯದ ಆಯ್ಕೆಯಲ್ಲಿ ತಮಿಳು ಭಾಷೆಗೆ ಆದ್ಯತೆ ಕೊಡಬೇಕು ಎಂದು ತಿಳಿಸಿದ್ದಾರೆ.
ಪಳನಿಸ್ವಾಮಿ ಟ್ವೀಟ್ ತೀವ್ರ ಚರ್ಚೆಗೆ ಕಾರಣವಾಗಿದ್ದು, ಬಳಿಕ ಆ ಟ್ವೀಟನ್ನು ಪಳನಿಸ್ವಾಮಿ ಡಿಲೀಟ್ ಮಾಡಿದ್ದಾರೆ.