ಬೆಂಗಳೂರು, ನ.25(DaijiworldNews/AA): ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆದ್ದರೆ ಕಾಂಗ್ರೆಸ್ ಸರ್ಕಾರ ಹಗರಣ ಮುಕ್ತವಲ್ಲ ಎಂದು ಬಿಜೆಪಿ ತಿಳಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಕಾಂಗ್ರೆಸ್ ಸರ್ಕಾರ ಭಷ್ಟಾಚಾರ ಮುಚ್ಚಿಹಾಕಲು ಮತದಾರರ ಆದೇಶವನ್ನು ಬಳಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮನ್ನ ಆರೋಪ ಮುಕ್ತ ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಲಿದೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ 9 ರಿಂದ ಆರಂಭವಾಗುವ ವಿಧಾನಮಂಡಲದ ಅಧಿವೇಶನಕ್ಕೆ ಮುಂಚಿತವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ, ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ವಕ್ಫ್ ವಿರುದ್ಧ ಹೋರಾಟ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.