ಬಳ್ಳಾರಿ, ನ.26(DaijiworldNews/AA): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸದಿದ್ರೆ ಅನುದಾನ ಬರೋದಿಲ್ಲ ಎಂದು ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ ಬೇಸರ ಹೊರಹಾಕಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಎರಡು ಗ್ಯಾರಂಟಿಗಳನ್ನ ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತೆ. ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರ್ತಿಲ್ಲ. ಬಸ್ನಲ್ಲಿ ಓಡಾಡೋದು ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತೀವಿ. ಒಂದೆರಡು ಗ್ಯಾರಂಟಿಗಳು ತೆಗೆಯಿರಿ ಅಂತಾ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳ್ತೀವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದು ಹೇಳಿದರು.
ಸದ್ಯ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲ ಎಂದು ವಿರೋಧ ಪಕ್ಷದ ನಾಯಕರು ಆರೋಪವನ್ನು ಮಾಡುತ್ತಿದ್ದರು. ಆದರೆ ಇದೀಗ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು 'ಕೈ' ಶಾಸಕರು ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ.