ಚೆನ್ನೈ, ನ.26(DaijiworldNews/AA): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಇಲಾಖೆ ಕೆಲ ಎಚ್ಚರಿಕೆಗಳನ್ನು ನೀಡಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಭಾರತೀಯ ಹವಾಮಾನ ಇಲಾಖೆ ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ನ.26 ರಂದು ಇತರ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ. ಇದು ನ.27 ರಂದು ತಮಿಳುನಾಡಿನ ಎರಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ನವೆಂಬರ್ 27 ರಂದು ಚಂಡಮಾರುತ ತೀವ್ರಗೊಳ್ಳಲಿದ್ದು, ಇದು ಉತ್ತರ-ವಾಯುವ್ಯದ ಕಡೆಗೆ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುತ್ತದೆ. ನಂತರದ 2 ದಿನಗಳಲ್ಲಿ ಶ್ರೀಲಂಕಾ ಕರಾವಳಿಯಲ್ಲೂ ಮಳೆಯಾಗಲಿದೆ. ನವೆಂಬರ್ 26 ಮತ್ತು 27 ರಂದು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ಇನ್ನು ಹವಾಮಾನ ಇಲಾಖೆ ಆಂಧ್ರಪ್ರದೇಶಕ್ಕೆ ಮಳೆಯ ಎಚ್ಚರಿಕೆಯನ್ನು ಸಹ ನೀಡಿದ್ದು, ನವೆಂಬರ್ 26 ರಿಂದ 29 ನಡುವೆ ಮಳೆಯಾಗಲಿದೆ. ನಾಗಪಟ್ಟಣಂ, ತಿರುವರೂರ್ ಮತ್ತು ಮೈಲಾಡುತುರೈ ಮತ್ತು ಕಾರೈಕಲ್ ಜಿಲ್ಲೆಗಳಿಗೆ ನ.26 ರಂದು ಐಎಂಡಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಪ್ರದೇಶದ ಹಲವೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.