ಚೆನ್ನೈ, ನ.26(DaijiworldNews/AK):ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲ್ಲೇ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಸಂಚಾರಕ್ಕೆ ಅಡೆತಡೆಯಾಗುತ್ತಿದ್ದು, ದಟ್ಟವಾದ ಮಂಜು ಅವರಿಸಿದ್ದು ರಸ್ತೆಗಳು ಕಾಣದಾಗಿದೆ.

ತಮಿಳುನಾಡಿನ ಕರಾವಳಿ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಮಂಗಳವಾರದಿಂದ ಮುಂದಿನ ಐದು ದಿನಗಳ ಕಾಲ ತೀವ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತದಿಂದ ರಾಮನಾಥಪುರಂ, ತಿರುಚಿರಾಪಳ್ಳಿ, ಪೆರಂಬಲೂರು, ಕಲ್ಲಕುರಿಚಿ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.