ಬೆಂಗಳೂರು, ನ.26(DaijiworldNews/AK): ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಯಿತು.

ಸಭೆಯಲ್ಲಿ ಪ್ರಮುಖವಾಗಿ-ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜನರಿಗೆ ಮನೆ, ಕುಡಿಯುವ ನೀರು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.
ರಸ್ತೆಗಳ ಅಭಿವೃದ್ಧಿಗೆ ಮತ್ತು ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಯಾವುದೇ ಅಡ್ಡಿ ಉಂಟು ಮಾಡಬಾರದು. ಪ್ರತಿ ಹಾಡಿಯಲ್ಲಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು.ಪಡಿತರ ಚೀಟಿ ಹೊಂದಿಲ್ಲದ ಬುಡಕಟ್ಟು ಕುಟುಂಬಗಳಿಗೆ 15 ದಿನಗಳ ಒಳಗಾಗಿ ಬಿಪಿಎಲ್ ಪಡಿತರ ಚೀಟಿ ಒದಗಿಸಿ ವರದಿ ಸಲ್ಲಿಸಬೇಕು.ಅರಣ್ಯ ಹಕ್ಕು ಸಮಿತಿಗಳ ಮುಂದೆ ಬಾಕಿಯಿರುವ ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಗ್ಯ ಇಲಾಖೆಯಲ್ಲಿ ಬುಡಕಟ್ಟು ಜನರನ್ನು ಸ್ಥಳೀಯವಾಗಿ ನೇಮಕ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುವುದು.ಬುಡಕಟ್ಟು ಸಮುದಾಯದವರಿಗೆ ಹಾಡಿಗಳಲ್ಲಿ ಸ್ಮಶಾನ ಭೂಮಿ ಒದಗಿಸಬೇಕು.ಬುಡಕಟ್ಟು ಸಮುದಾಯ ಕಲ್ಪಿಸುವ ವಿಷಯದಲ್ಲಿ ಕoದಾಯ, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯದಿoದ ಕಾರ್ಯ ನಿರ್ವಹಿಸಬೇಕು.ಸಂಪರ್ಕ ರಸ್ತೆಗಳ ದುರಸ್ತಿ, ಉನ್ನತೀಕರಣಕ್ಕೆ ರಾಜ್ಯ ಸರ್ಕಾರದ ಹಂತದಲ್ಲಿ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು.ಎರಡು ತಿoಗಳ ಒಳಗಾಗಿ ಮತ್ತೆ ಸಭೆ ಕರೆದು ಈ ಎಲ್ಲಾ ವಿಷಯಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಅದರ ಒಳಗಾಗಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸೂಚಿಸಿದರು.
ಮನೆ ನಿರ್ಮಾಣ:
-ನಿವೇಶನ ರಹಿತರು ಒಪ್ಪಿಗೆ ಸೂಚಿಸಿದರೆ ಅವರಿಗೆ ಬೇರೆ ಕಡೆ ನಿವೇಶನ ಒದಗಿಸಿ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಅರಣ್ಯದ ಅಂಚಿನಲ್ಲಿ ಜಮೀನುಗಳನ್ನು ಗುರುತಿಸಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮoತ್ರಿ ಅವರು ಸೂಚನೆ ನೀಡಿದರು.
ನಿವೇಶನ ಇದ್ದರೂ ಮನೆಯಿಲ್ಲದವರಿಗೆ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಮನೆ ಮಂಜೂರಾತಿಗೆ ಕ್ರಮ ಕೈಗೊಳ್ಳಬೇಕು ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಿ ಕ್ರಮಕೈಗೊಳ್ಳಲು ಸಿಎಂ ಸೂಚಿಸದರು.