ಅಯೋಧ್ಯೆ, ನ.30(DaijiworldNews/AA): ಸಮಾಜವಾದಿ ಪಕ್ಷ ಉತ್ತರಪ್ರದೇಶ ಮತ್ತು ಮಹಾರಾಷ್ಟ್ರ ಚುನಾವಣೆ ಸೋತ ಹತಾಶೆಯಲ್ಲಿ ಹೀಗೆ ಕೋಮುವಾದಿ ರಾಜಕಾರಣ ಮಾಡುತ್ತಿದೆ. ಹೀಗೆ ಕೋಮುವಾದಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಸಮಾಜವಾದಿ ಪಾರ್ಟಿ ಸಮಾಜದ ಶಾಂತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಸಮಾಜದಲ್ಲಿ ಇರುವ ಶಾಂತಿ ಕದಡುತ್ತಿದೆ. ಚುನಾವಣೆ ಸೋತ ಮಾತ್ರಕ್ಕೆ ಹೀಗೆ ಕೋಮುವಾದಿ ರಾಜಕಾರಣಕ್ಕೆ ಇಳಿಯುವುದು ಆ ಪಕ್ಷದ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಸಮಾಜವಾದಿ ಪಕ್ಷ ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದೆ. ಸಮಾಜವಾದಿ ನೆಪದಲ್ಲಿ ಸಮಾಜದ ಶಾಂತಿಗೆ ಭಂಗ ತರುವಂತಹ ವರ್ತನೆ ತೋರುವುದು ಸರಿಯಲ್ಲ. ಈ ಎರಡೂ ರಾಜ್ಯಗಳಲ್ಲಿ ಸಮಾಜದಲ್ಲಿ ಶಾಂತಿ ನೆಲೆಸಿದೆ. ಆದರೆ, ಸಮಾಜವಾದಿ ಪಕ್ಷ ಶಾಂತಿ ಕೆಡಿಸುತ್ತಿದೆ ಎಂದು ಹರಿಹಾಯ್ದರು.