ಮುಂಬೈ, ಡಿ.04(DaijiworldNews/AA): ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಇಂದು ತೆರೆ ಬಿದ್ದಿದೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರ ಹೆಸರನ್ನು ಅನುಮೋದಿಸಲಾಗಿತ್ತು. ಇದೀಗ ದೇವೇಂದ್ರ ಫಡ್ನವೀಸ್ ಮೂರನೇ ಬಾರಿಗೆ ಮಹಾರಾಷ್ಟ್ರದ ಸಿಎಂ ಆಗಲಿದ್ದಾರೆ. ಈ ಮೂಲಕ ಅವರು ಸಂಪೂರ್ಣ ಸ್ಥಾನಮಾನ ಮತ್ತು ಪ್ರಭಾವದೊಂದಿಗೆ ಮಹಾರಾಷ್ಟ್ರ ರಾಜಕೀಯಕ್ಕೆ ಮರಳಿದ್ದಾರೆ.
ಇನ್ನು 2019ರಲ್ಲಿ ಫಡ್ನವಿಸ್ ಅವರು 'ನೀರು ಬತ್ತಿ ಹೋಗಿದೆ ಎಂದು ದಡದಲ್ಲಿ ಮನೆಕಟ್ಟಬೇಡಿ ನಾನು ಸಾಗರ ಮತ್ತೆ ಹಿಂದಿರುಗುತ್ತೇನೆ ಎಂದು ಹೇಳಿದ್ದರು. ಇದೀಗ ಇಂದು ದೇವೇಂದ್ರ ಫಡ್ನವೀಸ್ ಅವರು ಸಿಎಂ ಆಗಿ ಆಯ್ಕೆಯಾದಾಗ ಆ 5 ವರ್ಷಗಳ ಹಿಂದಿನ ಹೇಳಿಕೆ ಸರಿ ಎಂದು ಸಾಬೀತಾಗಿದೆ.