ಬೆಂಗಳೂರು, ಜೂ07(Daijiworld News/SS): ನಾವು ಈ ಬಾರಿಯ ಸೋಲನ್ನು ಸವಾಲಾಗಿ ಸ್ವೀಕರಿದ್ದೇವೆ, ಸುಮ್ಮನೆ ಕೂರಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷವಾದ ಜೆಡಿಎಸ್'ನ್ನು ಕೊಲ್ಲುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಯಾರು ಪಕ್ಷ ತೊರೆದರೂ ಹೆದರುವುದಿಲ್ಲ. ಯಾವುದೇ ಸಮುದಾಯದವರಾದರೂ ನಿಷ್ಠೆಯಿಂದ ಇರಿ, ಪಕ್ಷಕ್ಕೆ ಮೋಸ ಮಾಡಬೇಡಿ, ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದ್ದಾರೆ.
ನಾವು ಈ ಬಾರಿ ನಡೆದ ಲೋಕಸಭಾ ಚುನಾವಣೆ ಸೋಲಿನಿಂದ ಸುಮ್ಮನೆ ಕೂರುವುದಿಲ್ಲ, ಸೋಲನ್ನೇ ಸವಾಲಾಗಿ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.
ಮೈತ್ರಿ ಸರ್ಕಾರಕ್ಕೆ ಧಕ್ಕೆ ಉಂಟಾಗದಂತೆ ಜೆಡಿಎಸ್ ಪಕ್ಷವನ್ನು ಬೇರುಮಟ್ಟದಿಂದ ಸಂಘಟನೆ ಮಾಡಲಾಗುವುದು ಎಂದು ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ.