ಬೆಂಗಳೂರು, ಜೂ 07: (Daijiworld News/SM): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಮಾತಿನ ಚಾಟಿ ಬೀಸಿದ್ದಾರೆ. ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಆಡಳಿತದಲ್ಲಿರುವ ದೋಸ್ತಿ ಸರಕಾರವನ್ನು ಮುಂದುವರೆಸಲು ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮನಸ್ಸಿಲ್ಲ. ಆದ್ದರಿಂದ ಅವರು ನಾಟಕವಾಡುತ್ತಿದ್ದಾರೆ. ಬಿಜೆಪಿಯವರು ಯಾವುದೇ ಆಪರೇಷನ್ ಕಮಲ ನಾವು ಮಾಡುತ್ತಿಲ್ಲ ಎಂದರು.
ಸಿದ್ದರಾಮಯ್ಯನವರು ತಮ್ಮ ನಾಲ್ಕು ಶಾಸಕರನ್ನು ಛೂ ಬಿಟ್ಟು ಆಪರೇಷನ್ ಕಮಲದ ಹೆಸರಿನಲ್ಲಿ ಆಟ ಆಡಿಸುತ್ತಿದ್ದಾರೆ. ಅವರಿಗೆ ಮತ್ತೆ ಸಿಎಂ ಖುರ್ಚಿ ಮೇಲೆ ಅಸೆಯಾಗಿದೆ. ಇದನ್ನು ವರಿಷ್ಠರಿಗೆ ತಿಳಿಸಲಿ. ಅದನ್ನು ಬಿಟ್ಟು ಇಂತಹ ಕಾರ್ಯ ನಡೇಸುವುದು ಶೋಭೆ ತರದು. ಬಿಜೆಪಿ ಪಕ್ಷದ ಯಾವುದೇ ನಾಯಕರು ಯಾವ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲ. ಇದೆಲ್ಲಾ ಕೇವಲ ಆರೋಪಗಳು ಮಾತ್ರ ಎಂದು ಸಂಸದೆ ಶೋಭಾ ಹೇಳಿದ್ದಾರೆ.