ಕೊಪ್ಪಳ, ಜೂ08(Daijiworld News/SS): ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಕುಡಿಯುವ ನೀರಿನ ದರ ಹೆಚ್ಚಿಸಬಾರದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಶುದ್ಧ ಕುಡಿಯುವ ನೀರಿನ ಪೂರೈಕೆ ದರ ಹೆಚ್ಚಳ ಮಾಡುತ್ತಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಕುಡಿಯು ನೀರಿನ ದರ ಹೆಚ್ಚಿಸಬಾರದು. ರಾಜ್ಯ ಸರ್ಕಾರ ಅಭಿವೃದ್ಧಿ ಕಡೆಗೆ ಗಮನ ಹರಿಸಲಿ. ಸರ್ಕಾರ ಜನರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.
ಶುದ್ಧ ಕುಡಿಯುವ ನೀರಿನ ದರ ಏರಿಕೆ ಮಾಡದಂತೆ ಮಾಜಿ ಸಚಿವ ಎಚ್.ಕೆ.ಪಾಟೀಲ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಬರ ತೀವ್ರವಾಗಿದ್ದು ಕುಡಿವ ನೀರಿನ ದರ ಹೆಚ್ಚಳ ನಿರ್ಧಾರ ಸರಿಯಲ್ಲ. ಯಾವ ಕಾರಣಕ್ಕೂ ಕುಡಿವ ನೀರಿನ ದರ ಹೆಚ್ಚಳ ಮಾಡಬಾರದು ಎಂದು ವಿನಂತಿಸಿಕೊಂಡಿದ್ದಾರೆ.
ಜೆಡಿಎಸ್ನವರ ಬುದ್ಧಿಗೆ ಜನ ಈಗಾಗಲೇ ತಕ್ಕ ಪಾಠ ಕಲಿಸಿದ್ದಾರೆ. ಸಚಿವ ಡಿ.ಸಿ.ತಮ್ಮಣ್ಣ ರಾಜ್ಯ ಸುತ್ತಿ ಜನರ ಸಮಸ್ಯೆ ಪರಿಹರಿಸುತ್ತಿಲ್ಲ. ಇದಕ್ಕೆ ಜನತೆಯೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ವ್ಯಂಗ್ಯವಾಗಿ ಹೇಳಿದರು.