ನವದೆಹಲಿ, ಡಿ.25(DaijiworldNews/TA): ಇಡೀ ವಿಶ್ವವೇ ಕ್ರಿಸ್ಮಸ್ ಆಚರಿಸುತ್ತಿರಯವ ಸುದಿನದಂದು, ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ್ದಾರೆ.

ಅವರು X ನಲ್ಲಿ "ನಿಮ್ಮೆಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು. ಲಾರ್ಡ್ ಜೀಸಸ್ ಕ್ರೈಸ್ಟ್ನ ಬೋಧನೆಗಳು ಎಲ್ಲರಿಗೂ ಶಾಂತಿ ಮತ್ತು ಸಮೃದ್ಧಿಯ ಹಾದಿಯನ್ನು ತೋರಿಸಲಿ ಎಂದು ಹೇಳಿದ್ದಾರೆ. ಸೋಮವಾರ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ ಮುಖ್ಯಾಂಶಗಳನ್ನು ಪ್ರಧಾನಿ ಹಂಚಿಕೊಂಡರು.
ಸಮಾರಂಭದಲ್ಲಿ ತಮ್ಮ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು ಯೇಸುಕ್ರಿಸ್ತನ ಬೋಧನೆಗಳಿಗೆ ಅನುಗುಣವಾಗಿ ಪ್ರೀತಿ, ಸಾಮರಸ್ಯ ಮತ್ತು ಸಹೋದರತ್ವದ ಮನೋಭಾವವನ್ನು ಬಲಪಡಿಸುವ ಮಹತ್ವವನ್ನು ಒತ್ತಿ ಹೇಳಿದರು.