ಬೆಂಗಳೂರು,ಡಿ.25(DaijiworldNews/TA): ಶಾಸಕ ಮುನಿರತ್ನ ಅವರ ಮೇಲೆ ಇಂದು ನಗರದಲ್ಲಿ ಮೊಟ್ಟೆ ದಾಳಿ ನಡೆದಿದೆ. ಮೊಟ್ಟೆ ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಲಕ್ಷ್ಮಿದೇವಿ ನಗರದಲ್ಲಿ ವಾಜಪೇಯಿಯವರ 100 ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದಾಗ ಮುನಿರತ್ನ ಮೇಲೆ ಕಲ್ಲು ಮತ್ತು ಮೊಟ್ಟೆ ದಾಳಿ ನಡೆದಿದೆ. ಕಾರಿನ ಗಾಜಿನ ಮೇಲೆಯೇ ಕಲ್ಲು ಬಿದ್ದಿದ್ದು, ಕೂಡಲೇ ಪೊಲೀಸರು ಮೊಟ್ಟೆ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮುನಿರತ್ನ ಅವರನ್ನು ಕೆಸಿ ಜನರಲ್ ಆಸ್ಪತ್ರಗೆ ದಾಖಲಾಗಿದ್ದಾರೆ. ಹಲವಾರು ಬಿಜೆಪಿ ಕಾರ್ಯಕರ್ತರು ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ. ಮೊಟ್ಟೆ ಹುನ್ನಾರದ ಬಗ್ಗೆ ಮತ್ತಷ್ಟು ಮಾಹಿತಿ ತನಿಖೆಯ ಬಳಿಕ ಬಹಿರಂಗವಾಗಲಿದೆ.