ಬೆಳಗಾವಿ, ಡಿ.25(DaijiworldNews/TA): ಎಂಎಲ್ಸಿ ಸಿ.ಟಿ.ರವಿ ಬಂಧನದ ವೇಳೆ ಬಿಜೆಪಿ ಮುಖಂಡರನ್ನು ಪೊಲೀಸ್ ಠಾಣೆಯೊಳಗೆ ಬಿಡುವ ಮೂಲಕ ಮೇಲಧಿಕಾರಿಗಳ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಕರ್ನಾಟಕ ಪೊಲೀಸರು ಬುಧವಾರ ಅಮಾನತುಗೊಳಿಸಿದ್ದಾರೆ.

ಈ ಸಂಬಂಧ ಐಜಿಪಿ (ಉತ್ತರ ವಲಯ) ವಿಕಾಶ್ ಕುಮಾರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಮೇಲಧಿಕಾರಿಗಳ ಆದೇಶ ಉಲ್ಲಂಘನೆ, ಕರ್ತವ್ಯಲೋಪ, ನಿರ್ಲಕ್ಷ್ಯ, ಬೇಜವಾಬ್ದಾರಿ ವರ್ತನೆಗೆ ಸಂಬಂಧಿಸಿದಂತೆ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ಐಜಿಪಿ ತಿಳಿಸಿದ್ದಾರೆ.
ಏತನ್ಮಧ್ಯೆ, ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು ವಿರೋಧಿಸಿ ಬಿಜೆಪಿ, ದಲಿತ ಹಾಗೂ ಕನ್ನಡ ಪರ ಸಂಘಟನೆಗಳು ಖಾನಾಪುರ ಬಂದ್ ಗೆ ಕರೆ ನೀಡಿರುವ ಬೆಳವಣಿಗೆ ರಾಜಕೀಯ ತಿರುವು ಪಡೆದುಕೊಂಡಿದೆ.