ದಾವಣಗೆರೆ, ಜೂ 09 (Daijiworld News/SM): ರಾಜ್ಯದಲ್ಲಿ ನಾವು ಯಾವುದೇ ರೀತಿಯಲ್ಲಿ ಆಪರೇಷನ್ ಕಮಲ ಮಾಡುವುದಿಲ್ಲ ಎಂದು ಶಾಸಕ ಶ್ರೀರಾಮುಲು ತಿಳಿಸಿದ್ದಾರೆ. ಆಪರೇಷನ್ ಕಮಲದಿಂದ ದೂರವಿರುವಂತೆ ಈಗಾಗಲೇ ಹೈಕಮಾಂಡ್ ಸೂಚನೆ ನೀಡಿದೆ ಎಂದರು.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, 'ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಒಡೆದ ಮನೆಯಂತಾಗಿದೆ. ಸಚಿವ ಸ್ಥಾನಕ್ಕಾಗಿ ಕಿತ್ತಾಟ ನಡೆಯುತ್ತಿದ್ದು, ಇಂದೋ ನಾಳೆಯೋ ಅಸಮಾಧಾನ ಹೊರ ಬೀಳಲಿದೆ ಎಂದರು.
ಇನ್ನು ಸಮನ್ವಯತೆ ಇಲ್ಲದ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ನಡೆಯುವುದಿಲ್ಲ. ಶೀಘ್ರದಲ್ಲೇ ದೋಸ್ತಿ ಸರಕಾರ ಪತನಗೊಳ್ಳಲಿದೆ ಎಂದು ಶ್ರೀರಾಮುಲು ಅವರು ಭವಿಷ್ಯ ನುಡಿದಿರು.