ಬೆಳಗಾವಿ, ಜ.14 (DaijiworldNews/AA): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ತೆರಳುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ.

ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅವಘಡ ನಡೆದಿದೆ.
ಈ ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.