ಅಮರಾವತಿ, ಜೂ 10(Daijiworld News/SM): ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರು ಆಂಧ್ರ ಪ್ರದೇಶದ ರಾಜ್ಯಪಾಲೆ ಆಗುವ ಸಾಧ್ಯತೆ ಬಹುತೇಕ ಇದೆ. ಈ ಕುರಿತ ಸುದ್ದಿ ಇದೀಗ ರಾಜಕೀಯ ವಲಯದಲ್ಲಿ ಜೋರಾಗಿ ಹಬ್ಬುತ್ತಿದೆ.
ಪ್ರಧಾನಿಗಳ ಸಚಿವಾಲಯದಿಂದ ಆಂಧ್ರದ ಹೊಸ ಸಿಎಂ ಜಗನ್ ಮೊಹನ್ ರೆಡ್ಡಿ ಅವರಿಗೆ ಈ ಬಗ್ಗೆ ಮಾಹಿತಿ ರವಾನೆಯಾಗಿದೆ ಎನ್ನಲಾಗಿದೆ. ಜಗನ್ ಅವರು ಸಹ ಸುಷ್ಮಾ ಸ್ವರಾಜ್ ಅವರನ್ನು ರಾಜ್ಯಪಾಲೆಯನ್ನಾಗಿ ಮಾಡಿದರೆ ಉತ್ತಮವೆಂದು ಕೇಳಿದ್ದಾರೆ ಎನ್ನಲಾಗಿದೆ.
ಸುಷ್ಮಾ ಸ್ವರಾಜ್ ಅವರು ಕಳೆದ ಅವಧಿಯಲ್ಲಿ ಮೋದಿ ಸಂಪುಟದಲ್ಲಿ ವಿದೇಶಾಂಗ ಸಚಿವೆಯಾಗಿ ಸೇವೆ ಸಲ್ಲಿಸಿದ್ದರು. ಅತ್ಯಂತ ಕ್ರಿಯಾಶೀಲರಾಗಿ ಅವರು ಕಾರ್ಯ ನಿರ್ವಹಿಸಿದ್ದರು. ಆದರೆ ಈ ಬಾರಿ ಅವರು ವೈಯಕ್ತಿಕ ಕಾರಣದಿಂದಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದರು. ಅಲ್ಲದೆ ಮಂತ್ರಿ ಮಂಡಲದಲ್ಲಿ ಸ್ಥಾನ ಬೇಡವೆಂದು ಮನವಿ ಸಲ್ಲಿಸಿದ್ದರು. ಅದರಂತೆ ಅವರನ್ನು ಸಂಪುಟದಿಂದ ದೂರವಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯಪಾಲರ ಹುದ್ದೆಯನ್ನು ನೀಡಲು ಕೇಂದ್ರ ನಿರ್ಧರಿಸಿದೆ ಎನ್ನಲಾಗಿದೆ.
ಆದರೆ ಇದೀಗ ಅವರು ಆಂಧ್ರ ಪ್ರದೇಶದ ರಾಜ್ಯಪಾಲರಾಗುವುದು ಬಹುತೇಕ ಖಚಿತ ಎನ್ನಲಾಗಿದೆ.