ಬೆಂಗಳೂರು, ಜೂ11(Daijiworld News/SS): ಕರ್ನಾಟಕದ ಸಿಂಗಂ ಎಂದೇ ಖ್ಯಾತರಾದ ಡಿಸಿಪಿ, ಎಸ್ಪಿ ಕೆ.ಅಣ್ಣಾಮಲೈ ಅವರು ಇತ್ತೀಚೆಗೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಬೆಂಗಳೂರು ದಕ್ಷಿಣ ಡಿಸಿಪಿ ಸ್ಥಾನಕ್ಕೆ ರೋಹಿಣಿ ಕಟೋಚ್ ಸೆಪಟ್ ನೇಮಕಗೊಂಡಿದ್ದಾರೆ.
ಬೆಂಗಳೂರಿನ ಕಚೇರಿಯಲ್ಲಿ ಕೆ.ಅಣ್ಣಾಮಲೈ ಅವರಿಂದ ರೋಹಿಣಿ ಕಟೋಚ್ ಸೆಪಟ್ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಅಣ್ಣಾಮಲೈ ಅಧಿಕಾರ ಹಸ್ತಾಂತರಿಸಿ ಸೆಪಟ್ ಅವರಿಗೆ ಶುಭ ಕೋರಿದರು.
ರೋಹಿಣಿ ಕಟೋಚ್ ಸೆಪಟ್ ಅವರಿಗೆ ಈ ಹಿಂದೆಯೂ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ ಅನುಭವವಿದ್ದು, ಕೋಲಾರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಣ್ಣಾಮಲೈ ಅವರ ರಾಜೀನಾಮೆ ಬಳಿಕ ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.
ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದ ಅಣ್ಣಾಮಲೈ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಆದರೆ, ಅವರಿಗೆ ಯಾವುದೇ ಹುದ್ದೆಯನ್ನು ನೀಡಿಲ್ಲ. ಅವರು ಈಗಾಗಲೇ ರಾಜೀನಾಮೆ ನೀಡಿದ್ದು, ಅದು ಇನ್ನೂ ಅಂಗೀಕಾರಗೊಂಡಿಲ್ಲ.