ಮುಂಬೈ, ಜ.19 (DaijiworldNews/AA): ಸೈಫ್ ಅಲಿಖಾನ್ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಆರೋಪಿಯನ್ನು ಮುಂಬೈ ಕೋರ್ಟ್ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪ್ರಕರಣದ ವಿಚಾರಣೆ ವೇಳೆ ಈ ಕೃತ್ಯದ ಹಿಂದೆ ಅಂತಾರಾಷ್ಟ್ರೀಯ ಪಿತೂರಿ ಶಂಕೆಯನ್ನು ತಳ್ಳಿಹಾಕುವಂತಿಲ್ಲ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
ಸೈಫ್ ಅಲಿಖಾನ್ ಮನೆಯಲ್ಲಿ ನಡೆದ ಕಳ್ಳತನ ಯತ್ನಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ನನ್ನು ಥಾಣೆಯಲ್ಲಿ ಬಂಧಿಸಲಾಗಿತ್ತು. ಈ ಬಂಧಿತ ಆರೋಪಿಯು ಬಾಂಗ್ಲಾದೇಶದವನಾಗಿರಬಹುದು ಎಂದು ತನಿಖೆ ವೇಳೆ ತಿಳಿದುಬಂದಿದೆ.
ಆರೋಪಿಯ ಬಳಿ ಯಾವುದೇ ಭಾರತೀಯ ದಾಖಲೆಗಳಿಲ್ಲ. ಅವನು ಬಾಂಗ್ಲಾದೇಶದವನೆಂದು ನಾವು ಶಂಕಿಸಿದ್ದೇವೆ, ನಾವು ತನಿಖೆ ನಡೆಸುತ್ತಿದ್ದೇವೆ ಮತ್ತು ಅವನ ವಿರುದ್ಧದ ಪ್ರಕರಣಕ್ಕೆ ಪಾಸ್ಪೋರ್ಟ್ ಕಾಯ್ದೆಯ ಆರೋಪಗಳನ್ನು ಸೇರಿಸಿದ್ದೇವೆ ಎಂದು ಡಿಸಿಪಿ ದೀಕ್ಷಿತ್ ಗೆಡಮ್ ಮಾಹಿತಿ ನೀಡಿದ್ದರು.