ಬೆಳಗಾವಿ,ಜ.20 (DaijiworldNews/AK): ಪ್ರಹ್ಲಾದ್ ಜೋಶಿಗೆ ಇತಿಹಾಸದ ಬಗ್ಗೆ ತಿಳಿದಿಲ್ಲಕಾಂಗ್ರೆಸ್ ನವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು, ಅಧಿವೇಶನ ನಡೆಸಲು ಹಕ್ಕಿಲ್ಲ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರಹ್ಲಾದ್ ಜೋಶಿ ಅವರಿಗೆ ಇತಿಹಾಸ ಗೊತ್ತಿಲ್ಲ. ಗೋಲ್ವಾಲ್ಕರ್, ಹಾಗೂ ಸಾವರ್ಕರ್ ಸಂವಿಧಾನ ಜಾರಿಯಾದಾಗ ಏನು ಮಾತನಾಡಿದ್ದರು ಎಂದು ತಿಳಿದಿದೆಯೇ ಅವರಿಗೆ ಎಂದು ಪ್ರಶ್ನಿಸಿದರು.

ಯತ್ನಾಳ್ ಇತಿಹಾಸ ಓದಿಕೊಂಡಿಲ್ಲ:
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗೋಡ್ಸೆ ಹತ್ಯೆಯಲ್ಲಿ ನೆಹರೂ ಅವರ ಪಾತ್ರವಿದೆ ಎಂದಿರುವ ಬಗ್ಗೆ ಮಾತನಾಡಿ ಅವರಿಗೆ ಇತಿಹಾಸ ತಿಳಿದಿಲ್ಲ ಹಾಗೂ ಅದನ್ನು ಓದಿಯೂ ಇಲ್ಲ ಎಂದರು. ಅದಕ್ಕಾಗಿಯೇ ಅಂಬೇಡ್ಕರ್ ಅವರು ಇತಿಹಾಸ ಗೊತ್ತಿಲ್ಲದವರು ಭವಿಷ್ಯವನ್ನು ಸೃಷ್ಟಿಸಲಾರರು ಎಂದು ಹೇಳಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.ಮಹಾತ್ಮಾ ಗಾಂಧಿ ಅವರನ್ನು ಗೋಡ್ಸೆ ಕೊಂದಿದ್ದು, ಆತನ ಜೊತೆ ಸಾವರ್ಕರ್ ಕೂಡ ಶಾಮೀಲಾಗಿರುವ ಬಗ್ಗೆ ಪ್ರಕರಣವಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು .